Skip to main content
Source
Kannada News18
Author
Kavya V
Date

ದೇಶದ ಪ್ರತಿ ರಾಜ್ಯದ ಮುಖ್ಯಮಂತ್ರಿ ಬಳಿಯು ಎಷ್ಟು ಆಸ್ತಿ ಇದೆ ಗೊತ್ತೇ? ಅತ್ಯಂತ ಶ್ರೀಮಂತ ಸಿಎಂ ಯಾರು, ಯಾವ ರಾಜ್ಯದ ಸಿಎಂ ಬಳಿ ಕಡಿಮೆ ಆಸ್ತಿ ಇದೆ ಎಂದು ತಿಳಿಯುವ ಕುತೂಹಲವೇ? ಹಾಗಾದರೆ ಈ ಲೇಖನದಲ್ಲಿ ಆ ಬಗ್ಗೆ ಮಾಹಿತಿ ನೀಡಲಾಗಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸೋಮವಾರ ಬಿಡುಗಡೆ ವರದಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದೇಶದ ಅಷ್ಟು ಮುಖ್ಯಮಂತ್ರಿಗಳ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಿದೆ.

ವರದಿಯ ಪ್ರಕಾರ, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂದರೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು. ಅವರು 931 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಹೊಂದಿರುವ ಭಾರತದ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ.

ಇನ್ನು ಕಡಿಮೆ ಆಸ್ತಿ ವಿಷಯಕ್ಕೆ ಬರೋದಾದರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಅತ್ಯಂತ ಬಡ ಸಿಎಂ ಎನಿಸಿಕೊಂಡಿದ್ದಾರೆ.

ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 52.59 ಕೋಟಿ ರೂಪಾಯಿ ಎಂದು ವರದಿ ಹೇಳಿದೆ.

2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ ಅಥವಾ NNI ಸರಿಸುಮಾರು 1,85,854 ರೂ. ಒಬ್ಬ ಮುಖ್ಯಮಂತ್ರಿಯ ಸರಾಸರಿ ಸ್ವಂತ ಆದಾಯ 13,64,310 ರೂ.ಗಳಾಗಿದ್ದು, ಇದು ಭಾರತದ ಸರಾಸರಿ ತಲಾ ಆದಾಯಕ್ಕಿಂತ ಸುಮಾರು 7.3 ಪಟ್ಟು ಹೆಚ್ಚು. 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1,630 ಕೋಟಿ ರೂ.

ಇನ್ನು ಚಂದ್ರಬಾಬು ನಾಯ್ಡು ನಂತರ, ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು 332 ಕೋಟಿ ರೂ.ಗಿಂತ ಹೆಚ್ಚು ನಿವ್ವಳ ಆಸ್ತಿಯೊಂದಿಗೆ ಎರಡನೇ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ.

ಪಿಣರಾಯಿ ವಿಜಯನ್ 118 ಕೋಟಿ ರೂಪಾಯಿ ಆಸ್ತಿ ಹೊಂದಿರುವ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಕರ್ನಾಟಕದ ಸಿದ್ದರಾಮಯ್ಯ ಅವರು 51 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 55 ಲಕ್ಷ ರೂಪಾಯಿ ಆಸ್ತಿಯೊಂದಿಗೆ ಎರಡನೇ ಬಡ ಸಿಎಂ ಎನಿಸಿಕೊಂಡಿದ್ದಾರೆ.

31 ಮುಖ್ಯಮಂತ್ರಿಗಳ ಪೈಕಿ ಇಬ್ಬರು ಮಾತ್ರ ಮಹಿಳಾ ಸಿಎಂಗಳು ಇದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ.


abc